

ಅಗತ್ಯ ತಯಾರಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ : ಹಾಜರಿರಲು ಎಲ್ಲ ಇಲಾಖೆಯ ಕಾರ್ಯದರ್ಶಿ ಗಳಿಗೆ ಪತ್ರ
ವಿಜಯವಾಣಿ ಸುದ್ದಿಜಾಲ ಕಲಬುರಗಿ.
ಕಲಬುರಗಿ ಯಲ್ಲಿ ಇದೇ ತಿಂಗಳು ಸೆ.23 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವಿಭಾಗೀಯ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಆವಾಹಲು ಸ್ವೀಕರಿಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅವಶ್ಯಕ, ಅಗತ್ಯ ಹಾಗೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಅವರು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಇಲಾಖೆಯ ಮುಖ್ಯಸ್ಥರು, ಕಲಬುರಗಿ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ.
ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು ತಮಗೆ ಒದಗಿಸಲಾಗಿರುವ ಕೌಂಟರ್ ಗಳಲ್ಲಿಯೇ ಇರಬೇಕು.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಶೌಚಾಲಯ, ಡಸ್ಟ್ ಬಿನ್ ಹಾಗೂ ಅಗತ್ಯ ಸ್ವಚ್ಛತಾ ಸಿಬ್ಬಂದಿಗಳನ್ನು ಒದಗಿಸುವಂತೆ ಕಲಬುರಗಿ ಮಹಾನಗರ ಪಾಲಿಕೆಗೆ, ವಿಕಲ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆ ಹಾಗೂ ಅಂತವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡುವಂತೆ ವಿಕಲಚೇತನರ ಇಲಾಖೆಗೆ, ಅರ್ಜಿದಾರರಿಗೆ, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಪಹಾರ ಹಾಗೂ ಊಟ ವ್ಯವಸ್ಥೆ ಮಾಡುವಂತೆ ಆಹಾರ ಇಲಾಖೆಗೆ, ವೈದ್ಯಕೀಯ ಹಾಗೂ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೋಗ್ಯ ಇಲಾಖೆಗೆ, ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ಒದಗಿಸುವಂತೆ ವಾರ್ತಾ ಮತ್ತು ಪ್ರಚಾರ ಇಲಾಖೆಗೆ, ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಜ್ಜುಗೊಳಿಸುವಂತೆ ಪೊಲೀಸ್ ಇಲಾಖೆಗೆ, ಅಗ್ನಿ ಅವಘಡಗಳಂತ ಸನ್ನಿವೇಶಗಳನ್ನು ಸಮರ್ಪಕ ವಾಗಿ ಎದುರಿಸಲು ಅಗ್ನಿಶಾಮಕ ಇಲಾಖೆಗೆ, ಸಾರ್ವಜನಿಕರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆತರಲು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೆಕೆ ಆರ್ ಟಿಸಿಗೆ, ಅಗತ್ಯ ವಿದ್ಯುತ್ ಸರಬರಾಜಿಗಾಗಿ ಜೆಸ್ಕಾಂಗೆ, ಜರ್ಮನ್ ಟೆಂಟ್, ಕಂಪ್ಯೂಟರ್, ಎಲ್ ಇಡಿ ಪರದೆ, ಮೂಲಭೂತ ಸೌಲಭ್ಯ, ಸಾರ್ವಜನಿಕರಿಗೆ ಕುಡಿಯುವ ನೀರು, ಬೆಳಗಿನ ಉಪಹಾರ ಮತ್ತು ಉಘು ಭೋಜನದ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗೆ ಹಾಗೂ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ತಾಂತ್ರಿಕ ವಿಭಾಗದವರಿಗೆ ಮಾಕ್ ತರಬೇತಿ ನೀಡಲು ವಿಭಾಗೀಯ ಆಯುಕ್ತರಿಗೆ ಅವರು ಪತ್ರಮುಖೇನ ಸೂಚಿಸಿದ್ದಾರೆ.