ಕಲಬುರಗಿಗೆ ೮ ರಂದು ಸಚಿವ ಸುರೇಶ : ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗಿ

B S Suresh
Published on


ಕಲಬುರಗಿ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಶುಕ್ರವಾರ ಕಲಬುರಗಿಗೆ ಆಗಮಿಸುವರು. ಅಂದು ಬೆಳಗ್ಗೆ ೧೦.೩೦ಕ್ಕೆ ಡಿಸಿ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗಕ್ಕೆ ಸಂಬAಧಿಸಿದAತೆ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ, ಕಂದಾಯ ವಿಷಯಗಳು, ಸಾರ್ವಜನಿಕ ಆರೋಗ್ಯ ಸೇವೆ ಕುರಿತು ಸಭೆ ನಡೆಸುವರು. ಮಧ್ಯಾಹ್ನ ೨.೩೦ಕ್ಕೆ ಡಿಸಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗಕ್ಕೆ ಸಂಬAಧಿಸಿದ ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮಗಳಿಗೆ ಸಂಬAಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ ೫ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net