

ಕಡಬ: ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ದೀಪಾವಳಿ ಕ್ರೀಡೋತ್ಸವ, ಗೋಪೂಜೆ ಇಲ್ಲಿನ ಶ್ರೀರಾಮ ಭಜನಾ ಮಂಡಳಿಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.
ಕಡಬ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ ಉದ್ಘಾಟಿಸಿ ಮಾತನಾಡಿ, ನಮ್ಮ ಮಣ್ಣಿನ ಧರ್ಮದ ಆಚರಣೆಗಳ ಮೇಲೆ ನಂಬಿಕೆಯಿಡಬೇಕು ಎಂದರು.
ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಗೌಡ ಅತಿಥಿಯಾಗಿ ಮಾತನಾಡಿದರು. ಗೆಳೆಯರ ಬಳಗದ ಗೌರವಾಧ್ಯಕ್ಷ ಗಣೇಶ್ ಎರ್ಮಡ್ಕ ಅಧ್ಯಕ್ಷತೆ ವಹಿಸಿದ್ದರು. ಗೆಳೆಯರ ಬಳಗದ ಅಧ್ಯಕ್ಷ ಪ್ರಶಾಂತ್ ಸಬಳೂರು, ಕಾರ್ಯದರ್ಶಿ ಗುರುಪ್ರಸಾದ್ ಪಟ್ಟೆದಮೂಲೆ ಉಪಸ್ಥಿತರಿದ್ದರು.
ಗೋಪೂಜೆಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದುರೆತ್ತಾಯ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೋಪೂಜೆ ನೆರವೇರಿಸಿದರು. ಹಿರಿಯರಾದ ಕುಶಾಲಪ್ಪ ಗೌಡ ಕಡೆಂಬ್ಯಾಲು ಕ್ರೀಡಾಂಗಣ ಉದ್ಘಾಟಿಸಿದರು. ಕೊೈಲ ಗ್ರಾಮ ಪಂಚಾಯಿತಿ ಸದಸ್ಯ ಚಿದಾನಂದ ಪಾನ್ಯಾಲ್ ಸ್ವಾಗತಿಸಿದರು. ಜಗದೀಶ್ ಸಬಳೂರು ವಂದಿಸಿದರು. ಶಿಕ್ಷಕ ಪರಮೇಶ್ವರ ಗೌಡ ಸಬಳೂರು ಕಾರ್ಯಕ್ರಮ ನಿರೂಪಿಸಿದರು.