

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಸಂಬಂಧ ಈ ಹಿಂದೆ ವಿಚಾರಣೆಗೊಳಪಟ್ಟಿದ್ದ ಮಾಜಿ ಮೇಯರ್ ಸಂಪತ್ ರಾಜ್ ಇದೀಗ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕಳೆದ ತಿಂಗಳು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಟ್ಟ ಪುಂಡರು ದಾಂಧಲೆ ನಡೆಸಿದ್ದರು. ಅಲ್ಲದೆ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲೂ ದಾಳಿ ಮಾಡಿದ್ದರು. ಸಿಕ್ಕಸಿಕ್ಕ ವಾಹನಗಳಿಗೂ ಬೆಂಕಿ ಹಚ್ಚಿ ಗಲಭೆ ಎಬ್ಬಿಸಿದ್ದರು. ಈ ಪ್ರಕರಣದಲ್ಲಿ ಸಂಪತ್ ರಾಜ್ ಹೆಸರು ಪ್ರಸ್ತಾಪವಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಕೊಡಲು ಸಿಸಿಬಿ ಪೊಲೀಸರು ಬುಧವಾರ ಸಂಪತ್ರಾಜ್ ಮನೆ ಬಳಿಗೆ ಹೋಗಿದ್ದು, ಅವರು ಕಳೆದ ಒಂದು ವಾರದಿಂದ ಮನೆಯಲ್ಲಿ ಇಲ್ಲದಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿರಿ ಕಾಂಗ್ರೆಸ್ ವಿರುದ್ಧ ಅಖಂಡ ಶ್ರೀನಿವಾಸ್ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!
ಪೊಲೀಸರ ಭಯದಿಂದ ಮನೆಗೆ ಬಾರದೆ ಸಂಪತ್ ರಾಜ್ ಎಸ್ಕೇಪ್ ಆಗುತ್ತಿದ್ದಾರೆ. ಕಾರು ಬಿಟ್ಟು ಆಟೋದಲ್ಲಿ ಓಡಾಡುತ್ತಿದ್ದಾರೆ ಎನ್ನಲಾಗಿದೆ. ಅಕ್ಷಮ್ಯ ಅಪರಾಧ ಎಸಗಿದವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಸಜ್ಜಾಗಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.