

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬುಧವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಯೋಜಿಸಲಾಗಿತ್ತು. ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆಯನ್ನು ಟ್ರ‍್ಯಾಕ್ಟರ್‌ನಲ್ಲಿ ಪ್ರತಿಷ್ಠಾಪಿತಿಸಿ ಮೆರವಣಿಗೆ ಮಾಡಲಾಯಿತು.
ಯುವಕರು, ಹಿರಿಯರು, ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಸಂಜೆ ವೇಳೆಗೆ ಭಾರಿ ಸದ್ದು ಮಾಡುವ ಡಿಜೆಗಳ ಅಬ್ಬರ ಜೋರಾಗಿತ್ತು. ಯುವಕರು ಡಿಜೆಗಳ ಹಾಡಿಗೆ ಕುಣಿದು ಕುಪ್ಪಳಿಸಿದರು. `ಛತ್ರಪತಿ ಶಿವಾಜಿ ಮಹಾರಾಜ ಕಿ ಜೈ' ಘೋಷಣೆಗಳು ಮೊಳಗಿದವರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.