ದಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ; ಸುಡುವ ಬಿಸಿಲಿನ ನಡುವೆ ಮೆರವಣಿಗೆ

mng-apr4-chowta3
ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಮಂಗಳೂರು ಬಂಟ್ಸ್‌ಹಾಸ್ಟೆಲ್ ಸಮೀಪದಲ್ಲಿರುವ ಪಕ್ಷದ ಚುನಾವಣಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ನಗರದ ಬಂಟ್ಸ್‌ಹಾಸ್ಟೆಲ್ ಸಮೀಪದಲ್ಲಿರುವ ಪಕ್ಷದ ಚುನಾವಣಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಉಡುಪಿ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಜೆಡಿಯಸ್‌ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, ಮುಖಂಡ ಎಂ.ಬಿ.ಸದಾಶಿವ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಉಡುಪಿ ಶಾಸಕ ಯಶಪಾಲ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮುಖಂಡರಾದ ಅರುಣ ಕುಮಾರ್ ಪುತ್ತಿಲ, ನಿತಿನ್ ಕುಮಾರ್, ಕ್ಯಾ.ಗಣೇಶ್ ಕಾರ್ಣಿಕ್ ಮುಂತಾದವರು ಭಾಗವಹಿಸಿದರು.
ಬಿಜೆಪಿ ಚುನಾವಣಾ ಕಚೇರಿಯಲ್ಲಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಬಾರತ ಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದರು. ರೂಪಾಡಿ. ಬಂಗೇರ ಅವರು ವಂದೇ ಮಾತರಂ ಹಾಡಿದರು.
ಪಕ್ಷದ ಅಭ್ಯರ್ಥಿ ಸುಡುವ ಬಿಸಿಲಿನ ನಡುವೆ ಪಕ್ಷದ ಕಾರ್ಯಕರ್ತರು, ಅಭಿಮಾಣಿಗಳು ಜಿಲ್ಲಾಧಿಕಾರಿ ಕಚೇರಿ ತನಕ ಪಾದಯಾತ್ರೆ ನಡೆಸಿದರು. ತೆರೆದ ವಾಹನದಲ್ಲಿ ನಿಂತುಕೊಂಡಿದ್ದ ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.
ಕುದ್ಮಲ್ ರಂಗರಾವ್ ಪುರಭವನದ ಸಮೀಪ ಪಕ್ಷದ ರಾಜ್ಯ ಮುಖಂಡರು, ಅಭ್ಯರ್ಥಿ ಸಾರ್ವಜನಿಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net