

ಪ್ರತಿಭಟನೆಯುದ್ದಕ್ಕೂ ‘ಚೆಂಬು ಚೆಂಬು ಪಂಡೆರ್…ಒಟ್ಟೆ ತಿಪ್ಪಿ ಕೊರಿಯೆರ್’..ಜನವಿರೋ ಕಾಂಗ್ರೆಸ್ ಸರಕಾರಕ್ಕೆ ಕ್ಕಾರ ಎಂಬಿತ್ಯಾದಿ ಘೋಷಣೆಗಳು ಕೇಳಿಬಂದವು.
ಈ ಸಂದರ್ಭ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಕ್ರೋಶ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಜನಸಾಮ್ಯಾರ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ. ರಾಜ್ಯ ಸರಕಾರದ್ದು ಕೇವಲ ಭರವಸೆಯ ಗ್ಯಾರಂಟಿ ಎಂದು ಟೀಕಿಸಿದರು.
ಜನತೆಗೆ ರಾಜ್ಯ ಸರ್ಕಾರ ಹೊರೆಯಾಗಿ ಪರಿಣಮಿಸಿದೆ. ದರ ಏರಿಕೆ ವಿರುದ್ಧ ಬಿಜೆಪಿ ವ್ಯಾಪಕ ಹೋರಾಟ ಹಮ್ಮಿಕೊಂಡಿದ್ದು, ದರ ಇಳಿಕೆ ಮಾಡುವವರೆಗೆ ಹೋರಾಟ ಮುಂದುವರಿಸಲಿದೆ. ಜನಸಾಮಾನ್ಯರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದು ಅವರು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕ ಡಿ.ವೇದವ್ಯಾಸ ಕಾಮತ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೇಯರ್ ಸುೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ಜಯಾನಂದ ಅಂಚನ್, ಉಪಮೇಯರ್ ಸುನೀತಾ, ಬಿಜೆಪಿ ಪ್ರಮುಖರಾದ ಕ್ಯಾ.ಗಣೇಶ್ ಕಾರ್ಣಿಕ್, ಡಾ.ಮಂಜುಳಾ ರಾವ್, ಪೂಜಾ ಪೈ, ಸುಮನಾ ಶರಣ್, ಕಿಶೋರ್ ಕುಮಾರ್ ಪುತ್ತೂರು, ಸಂತೋಷ್ ಕುಮಾರ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಜಗದೀಶ ಶೇಣವ, ನಿತಿನ್ ಕುಮಾರ್, ವಿಕಾಸ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು.