ಕೇಂದ್ರದ ಸಾಧನೆ ಜನರ ಮುಂದಿಡಲು ಸಾಮಾಜಿಕ ಜಾಲ ತಾಣದ ಬಳಕೆ- ‘ಶಂಖನಾದ’ ದಲ್ಲಿ ಪ್ರಕೋಷ್ಠ ಸದಸ್ಯರು, ಹಿತೈಷಿಗಳಿಗೆ ಸುದರ್ಶನ ಎಂ. ಕರೆ
ಬಿಜೆಪಿ ದ.ಕ. ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಕೋಷ್ಠ ಸದಸ್ಯರು ಹಾಗೂ ಹಿತೈಷಿಗಳಿಗೆ ಮಂಗಳೂರು ಸಂಘನಿಕೇತನದಲ್ಲಿ ಗುರುವಾರ ನಡೆದ ‘ಶಂಖನಾದ’ ಕಾರ್ಯಕ್ರಮವನ್ನು ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಸಾಮಾಜಿಕ ಜಾಲತಾಣ ಪ್ರಕೋಷ್ಠ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು, ರಾಜ್ಯ ಸಂಘಟನಾ ಸಂಚಾಲಕ ರಾಘವೇಂದ್ರ, ಸಹ ಸಂಚಾಲಕ ನರೇಂದ್ರಮೂರ್ತಿ, ರಾಜ್ಯ ಸಮಿತಿ ಸದಸ್ಯರಾದ ಕೃಷ್ಣ, ಶಂಕರ ಉಪಸ್ಥಿತರಿದ್ದರು.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಒಂಭತ್ತು ವರ್ಷಗಳ ಅವಧಿಯಲ್ಲಿ ವೈಜ್ಞಾನಿಕ, ಆರ್ಥಿಕ ಸಹಿತ ಎಲ್ಲ ಕ್ಷೇತ್ರಗಳಲ್ಲಿ ದೇಶ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನತೆಯ ಮುಂದಿಡುವಲ್ಲಿ ಸಾಮಾಜಿಕ ಜಾಲತಾಣವನ್ನು ಸಮಪರ್ಕಕವಾಗಿ ಬಳಕೆ ಮಾಡಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಹೇಳಿದರು.
ಬಿಜೆಪಿ ದಕ್ಷಿಣ ಕನ್ನಡ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಕೋಷ್ಠ ಸದಸ್ಯರು ಹಾಗೂ ಹಿತೈಷಿಗಳಿಗೆ ನಗರದ ಸಂಘನಿಕೇತನದಲ್ಲಿ ಗುರುವಾರ ನಡೆದ ‘ಶಂಖನಾದ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತ ಜಗತ್ತಿನ ಐದನೇ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಮುಂದಿನ 5 ವರ್ಷಗಳಲ್ಲಿ ಭಾರತವನ್ನು ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಸುವ ಸಂಕಲ್ಪವನ್ನು ಮೋದಿ ಅವರು ಕೈಗೊಂಡಿದ್ದಾರೆ. ಈ ಸಂಕಲ್ಪ ಸಾಕಾರಗೊಳ್ಳಲು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದರು.
ಮೋದಿ ಅವರನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಪ್ರತಿಪಕ್ಷಗಳು ‘ಇಂಡಿಯಾ’ ಒಕ್ಕೂಟ ರಚಿಸಿಕೊಂಡಿವೆ. ಆದರೆ, ಸಬ್‌ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದಡಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸಿ ದೇಶದ ಜನತೆಯ ಮನಗೆದ್ದಿದ್ದಾರೆ. ಇತ್ತೀಚೆಗೆ ನಡೆದ ಜಿ 20 ಸಭೆ ಭಾರತ ವಿಶ್ವನಾಯಕನಾಗಿ ಬೆಳೆಯುತ್ತಿರುವ ಸೂಚನೆ ನೀಡಿದೆ. ಬಿಜೆಪಿ ರಾಷ್ಟ್ರೀಯ ವಿಚಾರಧಾರೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರು ಕೇಂದ್ರದ ಸಾಧನೆ, ಮುಂದಿನ ಯೋಜನೆಯನ್ನು ಜನತೆಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಸಾಮಾಜಿಕ ಜಾಲತಾಣ ಪ್ರಕೋಷ್ಠ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು, ರಾಜ್ಯ ಸಂಘಟನಾ ಸಂಚಾಲಕ ರಾಘವೇಂದ್ರ, ಸಹ ಸಂಚಾಲಕ ನರೇಂದ್ರಮೂರ್ತಿ, ರಾಜ್ಯ ಸಮಿತಿ ಸದಸ್ಯರಾದ ಕೃಷ್ಣ, ಶಂಕರ ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಅಜಿತ್ ಉಳ್ಳಾಲ ಸ್ವಾಗತಿಸಿದರು. ಧೀರೇಶ್ ಕೊಲ್ಯ ವಂದಿಸಿದರು. ಪ್ರಸಾದ್ ಕಾಟೂರು ಸುಳ್ಯ ಕಾರ್ಯಕ್ರಮ ನಿರೂಪಿಸಿದರು.