ದಕ್ಷಿಣ ಕನ್ನಡ ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಪುನರಾಯ್ಕೆ

mng- sep 26- Azeez parthipadi
Published on

ಮಂಗಳೂರು: ನಗರದ ಹೋಟೆಲ್‌ನ ಸಭಾಂಗಣದಲ್ಲಿ ಜರುಗಿದ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ದ.ಕ.
ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವರು ಅವಿರೋಧವಾಗಿ ಪುನರಾಯ್ಕೆ ಯಾಗಿದ್ದಾರೆ.
ಇವರು ದ.ಕ.ಬಸ್ಸು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. 110 ವರ್ಷ ಇತಿಹಾಸವಿರುವ ಖಾಸಗಿ ಬಸ್ಸು ಸಾರಿಗೆ ವ್ಯವಸ್ಥೆಯಲ್ಲಿ ಇಡೀ ಏಷ್ಯಾ ಖಂಡದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಬಹಳ ಪ್ರಸಿದ್ಧಿಯನ್ನು ಪಡೆದಿದೆ. ದ.ಕ. ಬಸ್ಸು ಮಾಲೀಕರ ಸಂಘವು ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿ ಸಮುದಾಯಕ್ಕೆ ಉತ್ತಮ ಶಿಸ್ತುಬದ್ಧ,
ಸುರಕ್ಷಿತ ಸಾರಿಗೆ ಸೇವೆಯನ್ನು ನೀಡಲು ಬದ್ದವಾಗಿದೆ ಎಂದು ಅಝೀಝ್ ಪರ್ತಿಪಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net