ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಮುಖರಿಂದ ಖಾದಿ ಬಟ್ಟೆ ಖರೀದಿ

mng-2oct-bjp khaadi
Published on




ಮಂಗಳೂರು : ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ರಥಬೀದಿಯಲ್ಲಿರುವ ಖಾದಿ ಗ್ರಾಮೋದ್ಯೋಗ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಮುಖರು ಖಾದಿ ಬಟ್ಟೆ ಖರೀಸಿದರು.
ದೇಶಿಯ ಉತ್ಪನ್ನಗಳು ಮತ್ತು ದೇಶಿಯ ಉದ್ಯಮಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಪೂರಕವಾಗಿ ಖಾದಿ ಉತ್ಪನ್ನಗಳನ್ನು ಖರೀದಿಸಲಾಯಿತು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಈ ಸಂದರ್ಭ ಹೇಳಿದರು.
ಶಾಸಕ ಡಾ.ವೈ .ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷರುಗಳಾದ ರಾಕೇಶ್ ರೈ ಕೆಡೆಂಜಿ,ರವೀಂದ್ರ ಶೆಟ್ಟಿ ಉಳಿದೊಟ್ಟು , ಪೂಜಾ ಪೈ , ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಯುವ ಮೋರ್ಚ ಜಿಲ್ಲಾಧ್ಯಕ್ಷ ನಂದನ್
ಮಲ್ಯ , ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ , ಪ್ರಮುಖರಾದ ನಿತಿನ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ಅರುಣ್ ಶೇಟ್ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net