ಬೆಂಗಳೂರಿನ ಜನಪ್ರತಿನಿಧಿಗಳ ಸರ್ವಪಕ್ಷ ಸಭೆ ಕರೆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

DK Shivakumar
Published on

ಬೆಂಗಳೂರು: ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ.

ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ ೧೧ ಗಂಟೆಗೆ ಶುರುವಾಗಲಿದ್ದು ಸಭೆಯಲ್ಲಿ ಬೆಂಗಳೂರು ಜನಪ್ರತಿನಿಧಿಗಳು ‌ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸಿಎಂ ಆಗುವ ಬಯಕೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ ಡಿಕೆಶಿ!

ಈ ಸಭೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗಿಯಾಗಲಿದ್ದು ಇಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿರುವ ಕಾರಣ ಈ ಸಭೆ ಮಹತ್ವ ಪಡೆದಿದೆ. ಅದಲ್ಲದೇ ಇದೇ ಸಭೆಯಲ್ಲಿ ಬ್ರಾಂಡ್ ಬೆಂಗಳೂರು ಖ್ಯಾತಿ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಉದ್ದೇಶವನ್ನೂ ಇಟ್ಟುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net