

ಮಂಡ್ಯ: ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಕೆ.ಎಂ.ದೊಡ್ಡಿಗೆ ಡಿಕೆಶಿ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತ ಡಿಕೆಶಿ ಹಿಂಭಾಗ ಬರುತ್ತಿದ್ದ. ಹಿಂಭಾಗದಿಂದ ಡಿಕೆಶಿ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಥಳಿಸಿದ್ದಾರೆ ಎನ್ನಲಾಗಿದೆ.
ಡಿ.ಕೆ. ಶಿವಕುಮಾರ್ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ. ಅಲ್ಲದೆ, ಡಿಕೆಶಿ ವರ್ತನೆಯಿಂದ ಕಾರ್ಯಕರ್ತರಲ್ಲಿ ಅಸಮಧಾನವೂ ಉಂಟಾಗಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿಕೆಶಿ ಬಾರಿಸಿದ್ದರು.
ಮೊಬೈಲ್ನಲ್ಲಿ ವಿಡಿಯೋ ಮಾಡ್ತಿರೋದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ? ಕಾಮನ್‌ಸೆನ್ಸ್ ಇಲ್ವ ಎಂದು ಡಿಕೆಶಿ ಗದರಿದ್ದರು. (ದಿಗ್ವಿಜಯ ನ್ಯೂಸ್)