ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಮಧುಬಂಗಾರಪ್ಪ

Madhu Bangarappa
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಪ್ರಯತ್ನದ ಭಾಗವಾಗಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವ ನಗರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಏಪ್ರಿಲ್‌ನಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿವ ಬಗ್ಗೆ ಈಗಾಗಲೇ ಹೇಳಿಕೆ ನೀಡಿರುವ ಮಧುಬಂಗಾರಪ್ಪ, ನಿನ್ನೆಯಷ್ಟೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಬಂಗಾರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಿನ ಸಂದರ್ಭದಲ್ಲಿ ಕಾಂಗ್ರೆಸ್ ಜತೆಗಿನ ನೆನಪುಗಳನ್ನು ಅವರು ಈ ಭೇಟಿ ವೇಳೆ ನೆನಪಿಸಿಕೊಂಡಿದ್ದಾರೆ. ಜತೆಗೆ ಪಕ್ಷ ಯಾವ ರೀತಿ ಜವಾಬ್ದಾರಿಗಳನ್ನು ನೀಡುತ್ತದೋ ಆ ಪ್ರಕಾರ ತಾವು ಕ್ರಿಯಾಶೀಲವಾಗಿ ಕೆಲಸ ಮಾಡುವುದಾಗಿ ನಾಯಕರಿಗೆ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net