

ಬೆಂಗಳೂರು: ಜೆಡಿಎಸ್ನ ಮಾಜಿ ಶಾಸಕ, ಮಧುಬಂಗಾರಪ್ಪ ಜತೆ ಅವರ ಅಕ್ಕ ಗೀತಾ ಶಿವರಾಜ್ಕುಮಾರ್ ಕೂಡ ಕಾಂಗ್ರೆಸ್ ಸೇರಲಿದ್ದಾರೆ. ಈ ಬಗ್ಗೆ ಸ್ವತಃ ಮಧುಬಂಗಾರಪ್ಪಅವರೇ ತಿಳಿಸಿದ್ದಾರೆ.
ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದ ಮಧುಬಂಗಾರಪ್ಪ, ಇಂದು ಸದಾಶಿವನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರನ್ನ ಭೇಟಿ ಮಾಡಿ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾತ್ರವಲ್ಲ ನನ್ನ ಅಕ್ಕ ನನ್ನ ಅಕ್ಕ ಗೀತಾ ಶಿವರಾಜ್ಕುಮಾರ್ ಕೂಡ ಕಾಂಗ್ರೆಸ್ಗೆ ಬರಲಿದ್ದಾರೆ. ಮಾತುಕತೆ ಆಗಿದೆ. ಬಂದಿದ್ದಾರೆ ಅಂದುಕೊಳ್ಳಿ. ಡಿಕೆಶಿ ಅಧ್ಯಕ್ಷತೆಯಲ್ಲಿ ಕೆಲಸ ಮಾಡೋ ಅವಕಾಶ ಸಿಕ್ಕಿದೆ ಎಂದರು.
ಮಧುಬಂಗಾರಪ್ಪ ಮತ್ತು ಗೀತಾ ಶಿವರಾಜ್ಕುಮಾರ್ ಅವರು ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಮಕ್ಕಳು. ಗೀತಾ ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ರ ಪತ್ನಿ.