ಬಿಜೆಪಿ ಷಡ್ಯಂತ್ರ ಫಲಿಸಲ್ಲ, ಈ ಬಗ್ಗೆ ನಮಗೆ ಗೊತ್ತಿದೆ: ಡಿ.ಕೆ.ಶಿವಕುಮಾರ್

shivakumar (1)
Published on

ಬೆಂಗಳೂರು: "ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಹೈದೆರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಣಿಗಾ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.

"ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ" ಎಂದು ತಿಳಿಸಿದರು.

ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್:
"ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ.

ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net