ಡಿಕೆಶಿ ಬಂಧನಕ್ಕೆ ರಮೇಶ ಅಭಿಮಾನಿಗಳ ಆಗ್ರಹ

28gkk1-Web
ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಡಿ.ಕೆ.ಶಿವಕುಮಾರ ವಿರುದ್ಧ ಭಾನುವಾರ ಪ್ರತಿಭಟನೆ ನಡೆಸಿದರು.
Published on

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ನಕಲಿ ಸಿಡಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡವಿದೆ ಎಂದು ಆರೋಪಿಸಿ ನಗರದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದವರು ಭಾನುವಾರ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಶಾಸಕ ರಮೇಶ ಅವರ ಸಾವಿರಾರು ಅಭಿಮಾನಿಗಳು, ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮಹಿಳೆಯನ್ನು ಮುಂದಿಟ್ಟುಕೊಂಡು ಕ್ಷುಲ್ಲಕ ರಾಜಕಾರಣ ಮಾಡುತ್ತಿರುವ ಶಿವಕುಮಾರ ಅವರಿಗೆ ತಕ್ಕಪಾಠ ಕಲಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net