

ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕುಲಶೇಖರದ ಕೊರ್ಡೆಲ್ ಹಾಲ್ನಲ್ಲಿ ನಡೆಯಿತು.
ಒಕ್ಕೂಟವು 2023-24ನೇ ಸಾಲಿನಲ್ಲಿ ಒಟ್ಟು 1108.89 ಕೋಟಿ ರೂ.ವ್ಯವಹಾರ ನಡೆಸಿದೆ. ಹಿಂದಿನ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 6.13 ಪ್ರಗತಿ ಸಾಧಿಸಲಾಗಿದೆ. ವರದಿ ಸಾಲಿನಲ್ಲಿ 8.28 ಕೋಟಿ ರೂ.ನಿವ್ವಳ ಲಾಭ ಗಳಿಸಿದ್ದು, ಶೇ.25ರಷ್ಟು ಬೋನಸ್ ಸಂಘಗಳು ಒಕ್ಕೂಟಕ್ಕೆ ವರ್ಷದಲ್ಲಿ ನೀಡಿದ ಹಾಲಿನ ಪ್ರಮಾಣಕ್ಕನುಗುಣವಾಗಿ ನೀಡಲು ಮತ್ತು ಶೇ. 12 ರಂತೆ ಡಿವಿಡೆಂಡ್ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
*ಉತ್ತಮ ಹೈನುಗಾರರು
ಉತ್ತಮ ಹೈನುಗಾರರಾದ ಕುಂದಾಪುರದ ಮೇಕೋಡು ಹಾಲು ಉತ್ಪಾದಕರ ಸಂಘದ ಪ್ರಕಾಶ್ಚಂದ್ರ ಶೆಟ್ಟಿ, ಮಂಗಳೂರಿನ ಪಡುಮರ್ನಾಡು ಹಾಲು ಉತ್ಪಾದಕರ ಸಂಘದ ಲಿಮಲ ಲಿನೆಟ್ ಗೋನ್ಸಾಲಿಸ್, ಬಂಟ್ವಾಳದ ಅಲ್ಲಿಪಾದೆ ಹಾಲು ಉತ್ಪಾದಕರ ಸಹಕಾರ ಸಂಘದ ಸರಿತಾ ಐಡಾ ಫೆರ್ನಾಂಡಿಸ್ ಇವರುಗಳನ್ನು ಗೌರವಿಸಲಾಯಿತು.2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಲು ಉತ್ಪಾದಕರ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ನೀಡಲಾಯಿತು.
ಒಕ್ಕೂಟದ ನಿರ್ದೇಶಕರಾದ ರವಿರಾಜ ಹೆಗ್ಡೆ, ಕಾಪು ದಿವಾಕರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ,
ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ, ನರಸಿಂಹ ಕಾಮತ್, ಬಿ. ಸುಧಾಕರ ರೈ, ಎಂ. ಸುಧಾಕರ ಶೆಟ್ಟಿ, ಸುಭದ್ರಾ ರಾವ್, ಸವಿತ ಎನ್. ಶೆಟ್ಟಿ , ಸ್ಮಿತಾ ಆರ್. ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್ ,ಸಹಕಾರ ಸಂಘಗಳ ಉಪನಿಬಂಧಕರಾದ
ಎಚ್.ಎನ್. ರಮೇಶ್ ,ಡಾ. ಅರುಣ್ಕುಮಾರ್ ಶೆಟ್ಟಿ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ ಡಿ. ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ ಸ್ವಾಗತಿಸಿ, ನಿರ್ದೇಶಕಿ ಸ್ಮಿತಾ ಆರ್. ಶೆಟ್ಟಿ ವಂದಿಸಿದರು.