ಡಿಕೆಶಿ ಸಿಎಂ ಮಾಡುವಂತೆ ಪಟ್ಟು: ನಗರದಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

1 (2)
Published on

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದಿಂದ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಘದ ಅಧ್ಯಕ್ಷ ಸಿದ್ದೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವಕ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲು ಜನತೆ ಆಶೀರ್ವಾದ ಮಾಡಿದ್ದಾರೆ. ಇದಕ್ಕೆ ಮೂಲ ಪ್ರೇರಣೆಯಾಗಿ ಡಿ.ಕೆ.ಶಿವಕುಮಾರ್ ಅವರು ನಿಂತು ರಾಜ್ಯ ಸುತ್ತಿ ಸಂಘಟನೆ ಮಾಡಿದ್ದಾರೆ. ರಾಜಕೀಯ ಮುತ್ಸದ್ದಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕೂಡ ನಾವು ಕಡೆಗಣಿಸುವುದಿಲ್ಲ ಎಂದರು.

ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಸ್ವಾಮೀಜಿಗಳು ಕೂಡ ಆಸಕ್ತಿ ತೋರಿ ಒತ್ತಡ ಹಾಕಿದ್ದಾರೆ. ಆದ್ದರಿಂದ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಎಂದು ಘೋಷಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಹನುಮಂತು, ಕೆಪಿಸಿಸಿ ಸದಸ್ಯ ಸಿ.ಕೆ. ನಾಗರಾಜು, ನಗರಸಭಾ ಸದಸ್ಯ ರಾಮಲಿಂಗಯ್ಯ, ಗುತ್ತಲು ಪಾಪಣ್ಣ, ನಾಗೇಶ್, ಮಂಜು, ರಾಮು, ಶ್ರೀನಿವಾಸ್, ರೇಣುಕುಮಾರ, ಗೀತಾ, ಶೋಭಾ, ಜಯಲಕ್ಷ್ಮೀ ಶಾಂತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net