ಡಿಕೆಶಿ ರಾಜೀನಾಮೆಗೆ ಪಟ್ಟು

FotoJet (4)
Published on

 ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

 ಚನ್ನಪಟ್ಟಣ : ಸಂವಿಧಾನ ಬದಲಿಸುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ತಾಲೂಕು ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆ ನಡೆಸಿ ಡಿಕೆಶಿ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿದ ದೊಡ್ಡ ಅಪಮಾನ ಇದಾಗಿದೆ. ಹಾಗಾಗಿ, ಡಿಸಿಎಂ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ನೀಡುವ ವಿಚಾರದಲ್ಲಿ ಸಂವಿಧಾನ ಬದಲಿಸುವ ಬಗ್ಗೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ತಾಲೂಕು ಮಾಜಿ ಅಧ್ಯಕ್ಷ ಕೆ.ಟಿ. ಜಯರಾಮು, ಮಾಜಿ ನಗರಾಧ್ಯಕ್ಷ ವಿಷಕಂಠು, ನಗರ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಸಂತೋಷ್, ದಿಶಾ ಕಮಿಟಿ ಸದಸ್ಯ ಸಿದ್ದರಾಮಯ್ಯ, ಮುಖಂಡರಾದ ಲಕ್ಷ್ಮಣ್ ಸಿಂಗ್, ಬ್ಯಾಂಕ್ ನಾಗೇಂದ್ರ, ಧರ್ಮಪ್ರಕಾಶ್, ಜಿಲ್ಲಾ ಮಾಧ್ಯಮ ಸಂಚಾಲಕ ಚಿಕ್ಕಮಳೂರು ಚೇತನ್, ಹೇಮಾ, ಮಾಳಗಾಳು ರಾಜಪ್ಪ, ಜೆಡಿಎಸ್ ಮುಖಂಡ ಕೆಂಗಲ್‌ಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net