ಫೆ. 10ರಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ

ppppppp
Published on





ಮಂಗಳೂರು : ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ ಹಾಗೂ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸುಳ್ಯ ತಾಲೂಕಿನ ಬಂಗ್ಲೆಗುಡ್ಡೆಯ ಕೊಲ್ಲಮೊಗರು ಸರ್ಕಾರಿ ಶಾಲೆಯಲ್ಲಿ ಫೆ. 10ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ ರೈತ ಸಂತೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮಗಳಿಗೆ ಚಾಲನೆ ನೀಡಲಿದ್ದಾರೆ. ಸ್ವಸಹಾಯ ಗುಂಪುಗಳ ಉತ್ಪಾದನೆಗಳ ಮಾರಾಟ ಮಳಿಗೆಗಳನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ ಎಂದು ದ.ಕ .ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 10.30 ರಿಂದ 1ರವರೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನೇರ ಸಂವಾದ. ಮಧ್ಯಾಹ್ನ 2ರಿಂದ 3 ಗಂಟೆವರೆಗೆ ರೈತರಿಗೆ ಅಡಿಕೆ ಬೆಳೆಗೆ ಹಳದಿ ರೋಗ ಹಾಗೂ ಎಲ್ಲೆ ಚುಕ್ಕಿ ರೋಗದ ಬಗೆ ತಜ್ಞರಿಂದ ಮಹಿತಿ ಕಾರ್ಯಕ್ರಮ , ಮಧ್ಯಾಹ್ನ 3ರಿಂದ ರೈತರಿಗೆ ಹೈನುಗಾರಿಕೆ ಮತ್ತು ಜೇನು ಕೃಷಿ ಕುರಿತು ಮಾಹಿತಿ ಕಾರ್ಯಗಾರ ನಡೆಯಲಿದೆ.
ಸಾಯಂಕಾಲ 4ಕ್ಕೆ ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಂದ ಸ್ವಚ್ಛ ಗ್ರಾಮ ಸ್ವಚ್ಛ ಪರಿಸರ -ಪ್ಲಾಸ್ಟಿಕ್ ತ್ಯಾಜ್ಯ ವಿರುದ್ಧ ಜಾಗೃತಿ ಅಭಿಯಾನ ಹಾಗೂ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಳಿಕ ಗ್ರಾಮದ ವಿವಿಧ ಪ್ರದೇಶಗಳಿಗೆ ಪತ್ರಕರ್ತರ ಭೇಟಿ ಹಾಗೂ ಸಂಜೆ 7ಕ್ಕೆ ಐತ ಕೊರಗ ಎಂಬವರ ಮನೆಯಲ್ಲಿ ಚಾವಡಿ ಚರ್ಚೆ ನಡೆಯಲಿದೆ ಎಂದು ಅವರು ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.
..................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net