ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ಕೆಲಸ ಮಾಡುವ ಅವಕಾಶ

Justice
Published on

ಮಂಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಯೋಜನೆ ಕಾರ್ಯಕ್ರಮಗಳು ಹಾಗೂ ಇತರ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಅರೆ ಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಸೇವಕರು ಸಾಮಾಜಿಕ ಚಿಂತನೆ ಹಾಗೂ ಸಮಾಜ ಸೇವೆ ಮಾಡಲು ಆಸಕ್ತ ವಿದ್ಯಾವಂತ ಯುವಕರು ಹಾಗೂ ಯುವತಿಯರು, ರಾಜಕೀಯೇತರ ಸೇವಾ ಮನೋಭಾವವುಳ್ಳವರು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರು, ಸರ್ಕಾರಿ ನೌಕರರು, ಅಂಗನವಾಡಿ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಯಾವುದೇ ಸಂಭಾವನೆ ಇರುವುದಿಲ್ಲ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿದ ಅರೆ ಕಾಲಿಕ ಸ್ವಯಂ ಸೇವಕರಿಗೆ ಗೌರವಧನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಸಕ್ತರು ಸ್ವ ವಿವರದ ಮಾಹಿತಿಯೊಂದಿಗೆ ಆಗಸ್ಟ್ 27 ರೊಳಗಾಗಿ dlsamangalore@gmail.com ಗೆ ಅರ್ಜಿ ಸಲ್ಲಿಸಬಹುದು ಎಂದು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ. ಜಿ. ಶಿಲ್ಪಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net