ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ದಾರಿದೀಪವಾದ ಧರ್ಮಸ್ಥಳದ ಸುಜ್ಞಾನನಿಧಿ ಶಿಷ್ಯವೇತನ : ದಯಾಶೀಲ

IMG-20240919-WA0014.jpg
Published on

ಬೆಳಗಾವಿ: ಇಂದಿನ ಮಕ್ಕಳೆ ಮುಂದಿನ ಭವ್ಯ ಸಮಾಜ ನಿರ್ಮಾಣ ಮಾಡುವವರು.ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಜತ ಮಹೋತ್ಸವದ ಸವಿನೆನಪಿಗಾಗಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ಧಾರವಾಡ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ದಯಾಶೀಲ ಹೇಳಿದರು.ಇಲ್ಲಿನ ಕಂಗ್ರಾಳಿ ಕೆ ಎಚ್ ಯಲ್ಲಿರುವ ಶ್ರೀ ರಾಮಕೃಷ್ಣ ಹರಿ ಮಂಗಲ ಕಾರ್ಯಾಲಯ ಬುಧವಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ (ರಿ) ಬೆಳಗಾವಿ ತಾಲ್ಲೂಕಿನ ಸಹಯೋಗದಲ್ಲಿ ಆಯೋಜಿಸಲಾದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಈವರೆಗೆ 1 ಲಕ್ಷ ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಶಿಷ್ಯವೇತನ ನೀಡುತ್ತಿರುವುದು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ದಾರಿದೀಪವಾಗಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾದ 25 ವರ್ಷದ ನಂತರ ಸಮೀಕ್ಷೆ ನಡೆಸಿದ ಸಂದರ್ಭ ಆರ್ಥಿಕವಾಗಿ ಹಿಂದುಳಿದವರು ತಮ್ಮ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದರಿಂದ ಪೂಜ್ಯರು ಸಂಘದ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಪ್ರಾರಂಭಿಸಿದರು.ಈ ದಿನ 250 ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡುತ್ತಿರುವುದು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದಂತೆ ಆಗುತ್ತಿದೆ.ರಾಜ್ಯಾದ್ಯಂತ 700 ಕ್ಕೂ ಅಧಿಕ ಶುಧ್ಧಗಂಗಾ ಕುಡಿಯುವ ನೀರಿನಘಟಕ ಪ್ರಾರಂಭಿಸಿ ಶುದ್ಧ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಹೂಳು ತುಂಬಿರುವ ಕೆರೆಗಳನ್ನು ಹೂಳೆತ್ತುವ ಮೂಲಕ ಕೆರೆಗಳನ್ನು ಪುನಶ್ಚೇತನಗೊಳಿಸುವ ಕೆಲಸ ಮಾಡಲಾಗುತ್ತಿದೆ.ನಿರ್ಗತಿಕರಿಗೆ ಮಾಶಾಸನ ನೀಡುವ ಮೂಲಕ ಅಸಹಾಯಕರಿಗೆ ಅಭಯ ನೀಡುವ ಕೆಲಸ ಮಾಡಲಾಗುತ್ತಿದೆ. ಶಾಲೆಗಳಿಗೆ ಡೆಸ್ಕ ಬೇಂಚ್,ಮತ್ತು ಜ್ಞಾನದೀಪ ಶಿಕ್ಷಕರನ್ನು ಕೊಡುವ ಕೆಲಸ ಮಾಡಲಾಗುತ್ತಿದೆ. ದೇವಸ್ಥಾನ ಜೀರ್ಣೋದ್ಧಾರ ಮತ್ತು ಸಮುದಾಯ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುವ ಮತ್ತು ಜನಮಂಗಲ ಕಾರ್ಯಕ್ರಮ ಮೂಲಕ ವಾಕರ್, ವಾಕಿಂಗ್ ಸ್ಟಿಕ್, ವಾಟರ್ ಬೆಡ್ ನೀಡುವ ಮೂಲಕ ಜನೋಪಯೋಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಾರ್ಯಕ್ರಮ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಬಸವರಾಜ ಸೊಪ್ಪಿಮಠ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ ನಾಯ್ಕ, ಜನಜಾಗೃತಿ ವೇದಿಕೆಯ ಸದಸ್ಯರಾದ ಜಿ ಆರ್ ಸೋನೆರ, ರಾಷ್ಟೀಯ ಯುವ ದಲಿತ ಸಂಘದ ಅಧ್ಯಕ್ಷರಾದ ಮಲ್ಲೇಶ ಚೌಗಲೆ,ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ದಾಸಪ್ಪನವರ ಉಪಸ್ಥಿತರಿದ್ದರು. ಯೋಜನಾಧಿಕಾರಿ ನಾಗರಾಜ ಹದ್ಲಿ ಸ್ವಾಗತಿಸಿದರು, ಮೇಲ್ವಿಚಾರಕಿ ವೈಶಾಲಿ ಕಾರ್ಯಕ್ರಮ ನಿರೂಪಿಸಿದರು.
ಸುಭಾಷ ಪಿ ಸಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net