ಆಪರೇಷನ್‌ಗೆ ರಿವರ್ಸ್ ಆಪರೇಷನ್ ಮಾಡಿ ಎಚ್​ಡಿಕೆ! ಕಾಂಗ್ರೆಸ್​ ಮಾಜಿ ಶಾಸಕ ಜೆಡಿಎಸ್​ಗೆ!

hdk
Published on

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ರಂಗೇರಿದ್ದು ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು ಗೆಲ್ಲಲು ಉಭಯ ಪಕ್ಷಗಳು ಜಿದ್ದಾಜಿದ್ದಿ ಹೋರಾಟ ನಡೆಸುತ್ತಿವೆ.

ಹೀಗಾಗಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಇಬ್ಬರು ನಾಯಕರು ಆಪರೇಷನ್​ಗೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕುಳಿತುಕೊಂಡು ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಮಂಡ್ಯ, ತುಮಕೂರಿನಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಗಾಳ ಹಾಕುತ್ತಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಹಿರಿಯ ನಾಯಕರಾದ ನಿಂಗಪ್ಪ ಅವರು ಪಕ್ಷಕ್ಕೆ ಮರಳುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದಿದ್ದಾರೆ.

ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ನಿಂಗಪ್ಪ ಅವರು ಪಕ್ಷಕ್ಕೆ ಸೇರಲಿದ್ದಾರೆ. ಈಗಾಗಲೇ ಅವರು ನನ್ನ ಜತೆ ಮಾತುಕತೆ ನಡೆಸಿದ್ದಾರೆ.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ. ಮಾಜಿ ಶಾಸಕ ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net