ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನಡೆಯಲಿ

bjp membership
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಅವಳಿ ನಗರದಲ್ಲಿ 1.05 ಲಕ್ಷ ಜನ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನಡೆಯಲಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿಯ ಮಹಾನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೂರನೇ ಹಂತದ ಸದಸ್ಯತ್ವ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ಶನಿವಾರ ಮತ್ತು ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೆ ಬೂತ್ ಮಟ್ಟದಲ್ಲಿ ಅಭಿಯಾನವನ್ನು ನಡೆಸಬೇಕಿದೆ. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಕನಿಷ್ಠ 100 ಸದಸ್ಯರನ್ನು ಮಾಡಿದರೆ ಅವರು ಪಕ್ಷದ ಸಕ್ರಿಯ ಸದಸ್ಯರಾಗುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಸದಸ್ಯತ್ವ ಅಭಿಯಾನ ಪ್ರಾರಂಭವಾದಾಗಿನಿಂದ ಗಣೇಶ ಚತುರ್ಥಿ, ದಸರಾ ಹಬ್ಬಗಳು ಬಂದಿದ್ದರಿಂದ ಹಿನ್ನಡೆಯಾಗಿದೆ. ಈಗ ಶನಿವಾರದಿಂದ ಪೂರ್ಣ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನ ನಡೆಸಬೇಕಿದೆ ಎಂದು ಹೇಳಿದರು.

ಅಭಿಯಾನದ ಸಂಚಾಲಕ ನಾರಾಯಣ ಜರತಾರಘರ್, ಡಾ. ಕ್ರಾಂತಿ ಕಿರಣ, ಜಯತೀರ್ಥ ಕಟ್ಟಿ , ಸಂಜಯ ಕಪಟಕರ, ವಿಜಯಾನಂದ ಶೆಟ್ಟಿ, ಸಂತೋಷ ಚವ್ಹಾಣ, ಸುನೀಲ್ ಮೊರೆ, ಪ್ರಭು ನವಲಗುಂದಮಠ, ಬಸವರಾಜ ಗರಗ, ಮಣಿಕಂಠ ಶ್ಯಾಗೋಟಿ, ಜಿಲ್ಲಾ ವಕ್ತಾರ ರವಿ ನಾಯಕ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net