

ರಾಯಚೂರು: ಕುಡಿಯುವ ನೀರಿಗಾಗಿ ಪಂಪ್‌ಸೆಟ್‌ಗಳಿಗೆ ಪಡೆದಿರುವ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಸಂಪರ್ಕ ಕಡಿತಗೊಳಿಸಿ ರೈತರಿಗೆ ಬೆದರಿಕೆ ಹಾಕಿರುವ ಕಿರಿಯ ಇಂಜಿನಿಯರ್ ಜಿಲಾನಿ ಪಾಷಾ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯಿಸಿದೆ.
ಸಂಘದ ನಿಯೋಗ ಜೆಸ್ಕಾ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿಗೆ ಶುಕ್ರವಾರ ಮನವಿ ಸಲ್ಲಿಸಿ, ತಾಲೂಕಿನ ಕಡಗಂದೊಡ್ಡಿ ಗ್ರಾಮದಲ್ಲಿ ರೈತರು ಕುಡಿಯುವ ನೀರಿಗಾಗಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆದಿದ್ದನ್ನು ಕಡಿತಗೊಳಿಸಲಾಗಿದೆ ಎಂದು ದೂರಿದರು.
ತೀವ್ರ ಬರದಿಂದಾಗಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನೀರಿಗಾಗಿ ಜನರು ಪಂಪ್‌ಸೆಟ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಕಿರಿಯ ಇಂಜಿನಿಯರ್ ಜಿಲಾನಿ ಪಾಷಾ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪ್ರಶ್ನಿಸಿದ ರೈತರ ಮೇಲೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಕೂಡಲೇ ಅಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು. ಕುಡಿಯುವ ನೀರಿನ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಪರಿವರ್ತಕಗಳನ್ನು ಶೀಘ್ರಗತಿಯಲ್ಲಿ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಪದಾಕಾರಿಗಳಾದ ನರಸಿಂಗರಾವ್ ಕುಲಕರ್ಣಿ, ಅಬ್ದುಲ್ ಮಜೀದ್, ಅಕ್ಕಮ್ಮ ತಲಮಾರಿ, ಕೆ.ವೀರೇಶಗೌಡ, ಹುಲಿಗೆಪ್ಪ ಜಾಲಿಬೆಂಚಿ, ನರಸಪ್ಪ ಹೊಕ್ರಾಣಿ, ರಮೇಶ ಗಾಣಧಾಳ, ನದೀಮ್, ಚಂದಾಸಾಬ್ ಇದ್ದರು.