ಜನ-ಜಾನುವಾರುಗಳಿಗೆ ಕುಡಿವ ನೀರಿಗೆ ತೊಂದರೆಯಾಗದಿರಲಿ

19-GPT-2
ಗುಂಡ್ಲುಪೇಟೆ ಪಟ್ಟಣದ ತಲೂಕು ಕಚೇರಿ ಸಭಾಂಗಣದಲ್ಲಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಎಚ್.ಎಂ.ಗಣೇಶ್ ಪ್ರಸಾದ್, ಮರಿಸ್ವಾಮಿ, ಮಹೇಶ್, ರಮೇಶ್ ಬಾಬು ಇದ್ದರು.
Published on

ಗುಂಡ್ಲುಪೇಟೆ: ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವುದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಬರ ಹಾಗೂ ಹೆಚ್ಚಿನ ಗಾಳಿ-ಮಳೆಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಅಧಿಕಾರಿಗಳು ಸಂತ್ರಸ್ತರಿಗೆ ಪರಿಹಾರ ಸಿಗುವಂತೆ ಮಾಡಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡದಂತೆ ಸಂಬಂಧಪಟ್ಟ ಗ್ರಾಮಪಂಚಾಯಿತಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲದೆ ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ರಮೇಶ್ ಬಾಬು, ತಾಪಂ ಇಒ ರಾಮಲಿಂಗಯ್ಯ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net