ಹೊಸ ಮದ್ಯದ ಅಂಗಡಿಗೆ ಪರವಾನಗಿ ನೀಡಬೇಡಿ

03-10-Shiva-2
ಹೊಸ ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ರಾಯಚೂರಿನ ಪ್ರಧಾನ ಅಂಚೆ ಕಚೇರಿ ಮುಂದೆ ಸಿಪಿಐಎಂಎಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಪಕ್ಷದ ತಾಲೂಕು ಕಾರ್ಯದರ್ಶಿ ಆರ್.ಹುಚ್ಚರೆಡ್ಡಿ, ಪದಾಕಾರಿಗಳಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಮಲ್ಲಯ್ಯ ಕಟ್ಟಿಮನಿ, ನಿರಂಜನ್, ಲಕ್ಷ್ಮಣ ಇದ್ದರು.
Published on

ರಾಯಚೂರು: ರಾಜ್ಯ ಸರ್ಕಾರ ಹೊಸದಾಗಿ ಮದ್ಯದ ಅಂಗಡಿ ತೆರೆಯಲು ಮಂಜೂರಾತಿಗಾಗಿ ನೀಡಿರುವ ಪ್ರಸ್ತಾವನೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ನಗರದ ಪ್ರಧಾನ ಅಂಚೆ ಕಚೇರಿ ಮುಂದೆ ಮುಖ್ಯಮಂತ್ರಿಗೆ ಪತ್ರ ರವಾನಿಸುವ ಮೂಲಕ ಸಿಪಿಐಎಂಎಲ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ಮದ್ಯಕ್ಕೆ ದಾಸರಾಗಿ ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಒಂದೆಡೆ ಬೆಲೆ ಏರಿಕೆ, ಬಡತನ, ನಿರುದ್ಯೋಗದಿಂದ ಜೀವನ ಸಾಗಿಸುವುದು ದುಸ್ತರವಾಗಿದೆ. ಮತ್ತೊಂದೆಡೆ ನೈತಿಕ ವೌಲ್ಯ ಕುಸಿಯುತ್ತಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಅದಕ್ಕೆ ಮದ್ಯವೂ ಒಂದು ಕಾರಣ ಎಂದು ವರದಿಗಳು ಹೇಳುತ್ತಿವೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೊಸದಾಗಿ ಸಾವಿರ ಮದ್ಯದ ಅಂಗಡಿಗಳನ್ನು ತೆರೆಯಲು ತಯಾರಿ ನಡೆಸಿದ್ದು, ಸರ್ಕಾರ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಈ ಮಾರ್ಗ ಆಯ್ಕೆ ಮಾಡಿಕೊಂಡಿರುವುದು ಸರಿಯಲ್ಲ.
ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದ ಅಂಗಡಿ ಹಾಗೂ ಸೂಪರ್ ಮಾರ್ಕೆಟ್, ಮಾಲ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಮುಂದಾಗಿರುವುದು ಸರಿಯಲ್ಲ. ಕೂಡಲೇ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪತ್ರ ಚಳುವಳಿ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಪಕ್ಷದ ತಾಲೂಕು ಕಾರ್ಯದರ್ಶಿ ಆರ್.ಹುಚ್ಚರೆಡ್ಡಿ, ಪದಾಕಾರಿಗಳಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಮಲ್ಲಯ್ಯ ಕಟ್ಟಿಮನಿ, ನಿರಂಜನ್, ಲಕ್ಷ್ಮಣ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net