

ಅರಕೇರಾ: ಕಲಿಯುವ ಮತ್ತು ನಲಿಯುವ ವಯಸ್ಸಿನ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಶೃತಿ ಸಂಸ್ಕೃತಿ ಸಂಸ್ಥೆ ತಾಲೂಕು ಅಧ್ಯಕ್ಷ ರಾಮಣ್ಣ ಎನ್ ಗಣೇಕಲ್ ಹೇಳಿದರು. ಕ್ಯಾದಿಗ್ಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾರ್ವಜನಿಕರು ಪ್ರಬುದ್ಧರಾದರೆ ಮಾತ್ರ ಬಾಲಕಾರ್ಮಿಕ ಪದ್ಧತಿ ಪಿಡುಗನ್ನು ತೊಡೆದು ಹಾಕಲು ಸಾಧ್ಯ. ಬಾಲಕಾರ್ಮಿಕ ಪದ್ಧತಿಯು ಅನಿಷ್ಠ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ಜಾಗೃತಿ ಅಗತ್ಯವಾಗಿದೆ. ಕೈಗಾರಿಕೆ, ಕೃಷಿ, ವಾಣಿಜ್ಯ ಸಂಸ್ಥೆಗಳು, ಹೋಟೆಲ್, ಅಂಗಡಿ ಮುಂಗಟ್ಟುಗಳಲ್ಲಿ ದುಡಿಮೆಯಲ್ಲಿ ತೊಡಗಿರುವ ಬಾಲಕಾರ್ಮಿಕರನ್ನು ರಕ್ಷಣೆ ಮಾಡಬೇಕು. ಮಕ್ಕಳನ್ನು ಕಾರ್ಮಿಕರನ್ನಾಗಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದರು.
ಇದನ್ನೂ ಓದಿ: 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಕ್ರಮ: ಸಿಎಂ ಎಚ್ಚರಿಕೆ