ಸಚಿವರ ಬಗ್ಗೆ ಹಗುರ ಮಾತು ಬೇಡ

st somashekhar
Published on

ಮೈಸೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ರಾಜೀನಾಮೆ ಕೇಳುವ ನೈತಿಕತೆ ಯಾರಿಗೂ ಇಲ್ಲ. ಅವರ ನೇತೃತ್ವದಲ್ಲಿಯೇ ದಸರಾ ಮಹೋತ್ಸವ ನಡೆಯಲಿದೆ ಎಂದು ಆದಿಕರ್ನಾಟಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಕೆ.ಮುರಳಿ ಹೇಳಿದರು.


ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ್ ಸಚಿವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.


ಎಸ್.ಸಿ.ಸೋಮಶೇಖರ್ ಅವರ ದಕ್ಷತೆ, ಪ್ರಾಮಾಣಿಕತೆ, ನಿಷ್ಠೆ, ಸಾರ್ವಜನಿಕ ಆಡಳಿತದ ಮೇಲಿನ ಪ್ರೇಮ, ಸರ್ಕಾರಿ ಅಧಿಕಾರಿಗಳೊಂದಿಗಿನ ವಿಶ್ವಾಸ ಎಲ್ಲವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಅವರನ್ನು ಸಚಿವರನ್ನಾಗಿ ಮಾಡಿದೆ. ಅವರ ಮೇಲಿನ ಪ್ರಕರಣದ ಬಗ್ಗೆ ಕಾರ್ಯಾಂಗ, ನ್ಯಾಯಾಂಗ ತೀರ್ಮಾನ ಕೈಗೊಳ್ಳುತ್ತದೆ. ಮತ್ತೆ ಸಚಿವರ ವಿರುದ್ಧ ಹಗುರವಾಗಿ ಮಾತನಾಡಿದರೆ ಶಿವರಾಮ್ ವಿರುದ್ಧ ಆದಿ ಕರ್ನಾಟಕ ಹಿತರಕ್ಷಣಾ ಹೋರಾಟ ಸಮಿತಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವ ಬಳಗ ಸಂಘಟನೆಗಳು ಪ್ರತಿರೋಧ ಮಾಡಲಿವೆ ಎಂದರು.


ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವ ಬಳಗ ಅಧ್ಯಕ್ಷ ಎನ್.ಕೇಶವಮೂರ್ತಿ, ಉಪಾಧ್ಯಕ್ಷ ಎಂ.ಅನಿಲ್‌ಕುಮಾರ್, ಆದಿ ಕರ್ನಾಟಕ ಹಿತರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ಕುಮಾರ್, ಸಂಚಾಲಕ ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net