ಸಂಜೆಯಿಂದ ರಾತ್ರಿವರೆಗೆ ಕೃಷಿ ಪಂಪ್‌ಸೆಟ್ ಆನ್ ಮಾಡ್ಬೇಡಿ

areca
ಕೃಷಿ
Published on

ಶೃಂಗೇರಿ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರೈತರು ಪ್ರತಿದಿನ ಸಂಜೆಯಿಂದ ರಾತ್ರಿವರೆಗೆ ಕೃಷಿ ಮೋಟಾರ್ ಪಂಪ್‌ಸೆಟ್‌ಗಳನ್ನು ಚಾಲನೆ ಮಾಡಬಾರದು ಎಂದು ಮೆಸ್ಕಾಂ ಮನವಿ ಮಾಡಿದೆ.

ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ಸಮಯದಲ್ಲಿ ರೈತರು ನೀರಾವರಿ ಪಂಪ್‌ಸೆಟ್‌ಗಳನ್ನು ಚಾಲನೆ ಮಾಡುತ್ತಿರುವುದರಿಂದ ವಿದ್ಯುತ್ ಮಾರ್ಗ ಹಾಗೂ ಪರಿವರ್ತಕಗಳಲ್ಲಿ ಅಧಿಕ ಒತ್ತಡದಿಂದ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ತೊಂದರೆ ಉಂಟಾಗುತ್ತಿದೆ. ಪರೀಕ್ಷೆ ಮುಗಿಯುವ ತನಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರೈತರು ಮೆಸ್ಕಾಂಗೆ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net