ತಾಲೂಕು ಮಟ್ಟದ ಸಭೆ ನಿರಂತರ ನಡೆಸಿ

DC Meeting
Published on

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆ ಹಾಗೂ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ, ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವಂತೆ ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮವಹಿಸಿ, ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲನಿಗಳಲ್ಲಿ ಕಾಲಕಾಲಕ್ಕೆ ವೈದ್ಯಕೀಯ ಶಿಬಿರಗಳನ್ನು ನಡೆಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ, ಅಧ್ಯಯನ ವಸ್ತುಗಳನ್ನು ನೀಡುವಲ್ಲಿ ಯಾವುದೇ ವಿಳಂಬ ಧೋರಣೆ ಮಾಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಯಮುನಾ ಗಾಂವ್ಕರ, ವೆಂಕಟೇಶ ನಾಯ್ಕ, ದೀಪಕ ಕುಡಾಳಕರ, ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ, ಎಸ್‌ಪಿ ಎನ್. ವಿಷ್ಣುವರ್ಧನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗಿಸ್, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಒ ಮಂಜುನಾಥ ನಾವಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net