ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿ

ಫೋಟೋ ಶೀರ್ಷಿಕೆ 28 ಸಿಆರ್_ಪಿ-2 ಎ
ಪಟ್ಟಣದ ಆದಿಚುಂಚನಗಿರಿ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಕಬಡ್ಡಿ ಟೂರ್ನಿಯಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಕೆ.ಎಸ್.ಅಭಿಷೇಕ್ ಅವರನ್ನು ಸನ್ಮಾನಿಸಲಾಯಿತು. ಎಂ.ಕೆ.ಮಂಜುನಾಥ್, ಜೆ.ಭಾಸ್ಕರ್, ಸಿ.ಸಿ.ಕುಮಾರ್, ಎಸ್.ಕುಮಾರ್, ಲಕ್ಷ್ಮೀಕಾಂತ್, ರಂಗನಾಥ್ ಇದ್ದರು
Published on

ಚನ್ನರಾಯಪಟ್ಟಣ: ಯುವಜನತೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಂಡು ಉತ್ತಮ ಸಾಧನೆ ಮಾಡಬೇಕು ಎಂದು ರಾಷ್ಟ್ರೀಯ ಕಬಡ್ಡಿ ಆಟಗಾರ ಕೆ.ಎಸ್.ಅಭಿಷೇಕ್ ಹೇಳಿದರು.

ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ, ಐಕ್ಯುಎಸಿ ಸಹಯೋಗದಲ್ಲಿ ಗುರುವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಶ್ವವಿದ್ಯಾಲಯ ಮಲೆನಾಡು ವಲಯ ಅಂತರ ಕಾಲೇಜುಗಳ ಪುರುಷರ ವಿಭಾಗದ ಕಬಡ್ಡಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ವ್ಯಾಸಂಗದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉನ್ನತಿ ಸಾಧಿಸಬಹುದು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಬಿ.ಜಿ.ಎಸ್. ಶಿಕ್ಷಣ ಸಂಸ್ಥೆಯ ಪಾಂಶುಪಾಲ ಸಿ.ಸಿ.ಕುಮಾರ್ ಮಾತನಾಡಿ, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ನಾಯಕತ್ವದ ಗುಣ ರೂಢಿಸಿಕೊಳ್ಳಬಹುದು. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯವಾದದ್ದು. ಸೋತವರು ವಿಚಲಿತರಾಗದೆ ಚೆನ್ನಾಗಿ ಅಭ್ಯಾಸ ಮಾಡಿ ಮುಂದಿನ ದಿನಗಳಲ್ಲಿ ಗೆಲುವು ಸಾಧಿಸಬೇಕು ಎಂದು ತಿಳಿಸಿದರು.

ಆದಿಚುಂಚನಗಿರಿ ಬಿ.ಇಡಿ. ಕಾಲೇಜು ಸಹ ಪ್ರಾಧ್ಯಾಪಕ ಎಸ್.ಲಕ್ಷ್ಮೀಕಾಂತ್ ಮಾತನಾಡಿ, ರಾಷ್ಟ್ರಗಳ ನಡುವೆ ಸುಮದುರ ಬಾಂಧವ್ಯವನ್ನುಂಟು ಮಾಡಲು ಕ್ರೀಡೆಗಳು ಸಹಕಾರಿಯಾಗಿವೆ ಎಂದರು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ 14 ತಂಡಗಳು: ರಾಷ್ಟ್ರೀಯ ಕಬಡ್ಡಿ ಆಟಗಾರ ಕೆ.ಎಸ್.ಅಭಿಷೇಕ್ ಅವರನ್ನು ಸನ್ಮಾನಿಸಲಾಯಿತು. ಮಲೆನಾಡು ವಲಯದ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಚಾಲಕ ಪಿ.ಪ್ರಕಾಶ್, ಸಿ.ಸಿ.ಕುಮಾರ್ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಎಂ.ಕೆ.ಮಂಜುನಾಥ್, ದೈಹಿಕ ಶಿಕ್ಷಣ ನಿರ್ದೇಶಕ ಜೆ.ಭಾಸ್ಕರ್, ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ರಂಗನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net