ವೈದ್ಯಾಧಿಕಾರಿ ನೇಮಿಸುವಂತೆ ಮನವಿ

30mdk01
Published on

ಮಡಿಕೇರಿ:
ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಸ್ಥಳೀಯ ಗಜಾನನ ಯುವಕ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ಮುಂದಿನ ೧೦ ದಿನದಲ್ಲಿ ವೈದ್ಯಾಧಿಕಾರಿ ನೇಮಕವಾಗದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವುದರಿಂದ ಹಲವು ರೀತಿಯಲ್ಲಿ ಸಮಸ್ಯೆಯಾಗುತ್ತಿದೆ. ಅದರಲ್ಲೂ ತುರ್ತು ಸಂದರ್ಭದಲ್ಲಿ ಈ ಭಾಗದ ಜನ ತೀವ್ರ ತೊಂದರೆ ಎದುರಿಸುತ್ತಾರೆ. ತುರ್ತು ಅಗತ್ಯ ಎದುರಾದಾಗ ಆಸ್ಪತ್ರೆ ಇದ್ದರೂ ಇಲ್ಲದಂಥ ಪರಿಸ್ಥಿತಿ ಎದುರಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಸಮಸ್ಯೆಯನ್ನು ವಿವರಿಸಿದ್ದಾರೆ.

ಭಾಗಮಂಡಲ ವ್ಯಾಪ್ತಿಯ ಏಳು ಗ್ರಾಮಕ್ಕೆ ಇರುವ ಆರೋಗ್ಯ ಕೇಂದ್ರ ಇದು. ಇಲ್ಲಿಗೆ ಪೂರ್ಣಾವಧಿಯಲ್ಲಿ ಕಾರ್ಯನಿರ್ವಹಣೆ ಮಾಡುವ ವೈದ್ಯಾಧಿಕಾರಿಯನ್ನು ನೇಮಿಸಿ, ಭಾಗದ ಜನರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ಸಂಘದ ಅಧ್ಯಕ್ಷ ಗೌರೀಶ್ ರೈ, ಉಪಾಧ್ಯಕ್ಷ ಅನಂತ್ ಮತ್ತು ಸದಸ್ಯರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net