ಕಾರು ಅಪಘಾತದಲ್ಲಿ ವೈದ್ಯ ಸಾವು

IMG-20240831-WA0237
ತಾಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಅಪಘಾತಕ್ಕೀಡಾಗಿರುವ ಕಾರು.
Published on

ಶ್ರೀರಂಗಪಟ್ಟಣ: ತಾಲೂಕಿನ ಗೌಡಹಳ್ಳಿ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಟಾಟಾ ನ್ಯಾನೋ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ವೈದ್ಯರೊಬ್ಬರು ಮೃತಪಟ್ಟಿದ್ದಾರೆ.


ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಮೂಲದ ಸತ್ಯಸಾಯಿ ಮಾನವ ಸಂಶೋಧನ ಕೇಂದ್ರದಲ್ಲಿ ವೈದ್ಯರಾಗಿದ್ದ ಡಾ.ಭಾಸ್ಕರನ್ (53)ಮೃತ. ಕಾರ್ಯನಿಮಿತ್ತ ಮೈಸೂರಿಗೆ ಆಗಮಿಸಿದ್ದ ಭಾಸ್ಕರನ್, ಶನಿವಾರ ತಮ್ಮ ಸ್ವಂತ ಸ್ಥಳಕ್ಕೆ ಬೆಂಗಳೂರು ಮಾರ್ಗವಾಗಿ ಹಿಂತಿರುಗುತ್ತಿದ್ದಾಗ ಗೌಡಹಳ್ಳಿ ಗೇಟ್ ಬಳಿ ನಿದ್ದೆ ಮಂಪರಿನಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ತಕ್ಷಣ ಗಾಯಾಳುವನ್ನು ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ತುರ್ತು ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾಸ್ಕರನ್ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net