ವೈದ್ಯ ಡಾ.ಮಂಜುದೇವ ಸಾಧನೆ

Doctor Dr. Manjudeva Sadhane
ಕ್ರೀಡೆಯಲ್ಲಿ ಸಾಧನೆ ಮಾಡಿದ ಬಾಗಲಕೋಟೆ ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಡಾ.ಮಂಜುದೇವ ಎಸ್.ಎನ್., ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಅಶೋಕ ಎಸ್. ಮಲ್ಲಾಪೂರ ಇದ್ದಾರೆ.
Published on

ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಎಲುಬು ಮತ್ತು ಕೀಲು ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುದೇವ ಎಸ್.ಎನ್. ರಾಜ್ಯಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್‌ನಲ್ಲಿ ದ್ವಿತೀಯ ಮತ್ತು ಸಿಂಗಲ್‌ನಲ್ಲಿ ತೃತೀಯ ಬಹುಮಾನ ಪಡೆದು ಕೀರ್ತಿ ತಂದಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಬೋಧಕ ಸಿಬ್ಬಂದಿಗಾಗಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಡಾ.ಮಂಜುದೇವ್ ಎಸ್.ಎನ್ ಅವರು ಭಾಗವಹಿಸಿ ಸಾಧನೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net