ಗ್ರಾಮೀಣ ಪ್ರದೇಶಕ್ಕೆ ಬರಲು ವೈದ್ಯರು ಹಿಂದೇಟು

shilanyasa
ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಶಿಲಾನ್ಯಾಸ ನೆರವೇರಿಸಿದರು.
Published on

ಕುಂದಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ಕಾಡುತ್ತಿದೆ. ಕಾಯಿಲೆ ಬರುವ ಮೊದಲೇ ಜಾಗೃತೆ ವಹಿಸಬೇಕು. ಆರೋಗ್ಯ ಸೇವೆ ನೀಡಲು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಅನೇಕ ಕಾರ್ಯಕ್ರಮ ಹಾಕಿಕೊಂಡಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ 65 ಲಕ್ಷ ರೂ. ವೆಚ್ಚದಲ್ಲಿ ನಿರ್ವಾಣಗೊಳ್ಳಲಿರುವ ನಾಡ ಬಿ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶುಕ್ರವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ನಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಪೃಥ್ವೀಶ್, ವಾಜಿ ಅಧ್ಯಕ್ಷ ದಿನೇಶ ಶೆಟ್ಟಿ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇವಾನಂದ, ನಾಡ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ.ನಿಶಾ, ಡಾ.ಚಿಕ್ಮರಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರವೀಣಕುವಾರ್ ಶೆಟ್ಟಿ, ಅಶೋಕ ಶೆಟ್ಟಿ ಸಂಸಾಡಿ, ಕಿಶೋರ್‌ಕುವಾರ್ ಶೆಟ್ಟಿ, ವಿಶ್ವನಾಥ, ಮುಖ್ಯಶಿಕ್ಷಕ ಸಂತೋಷಕುವಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net