

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ವೈದ್ಯರೊಬ್ಬರ ಬೈಕ್ ಕಳ್ಳತನವಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಮುಂಭಾಗ ಲಾಕ್ ಮಾಡಿ ನಿಲ್ಲಿಸಿದ ಬೈಕ್ ಕಳುವಾಗಿದೆ. ಡಾ. ರಾಕೇಶ್‌ಕುಮಾರ್ ಅವರು ಸೆ.9ರಂದು ಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಬೈಕ್ ಅನ್ನು ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು. ಮಧ್ಯಾಹ್ನ ಡ್ಯೂಟಿ ಮುಗಿಸಿ ಹೊರಗೆ ಬಂದಾಗ ಅವರ ಬೈಕ್ ನಾಪತ್ತೆಯಾಗಿತ್ತು. ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.