ಪ್ಯಾರಾಸಿಟಮಲ್​ ಪಡೆಯಲು ವೈದ್ಯರ ಸಲಹಾ ಚೀಟಿ ಅಗತ್ಯ

paracetamol
Published on

ಉಡುಪಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇವೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್​ ಮತ್ತು ಇತರೆ ಆಂಟಿಬಯೋಟಿಕ್​ ಔಷಧಗಳ ಮಾರಾಟ ಮಾಡಬಾರದೆಂದು ಉಡುಪಿ ಜಿಲ್ಲಾ ಸಹಾಯಕ ಔಷಧಿ ನಿಯಂತ್ರಕರು ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ರಕ್ತದಾನಿಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net