

ಭಟ್ಕಳ: ಗರ್ಭಕೋಶದಲ್ಲಿ ಮಲಮತ್ತ ಸುತ್ತಿಕೊಂಡು ಅಪಾಯಕಾರಿ ಸ್ಥಿತಿಯಲಿದ್ದ ಮಹಿಳೆಯನ್ನು ಬುಧವಾರ ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆ ಹಾಗೂ ಮಗುವಿನ ಪ್ರಾಣ ಕಾಪಾಡಿದ್ದಾರೆ.
ತಾಲೂಕಿನ ಶಿರಾಲಿ ನಿವಾಸಿ 34 ವರ್ಷದ ಮಹಿಳೆಯೊಬ್ಬರು ತಮ್ಮ ಎರಡನೇ ಗರ್ಭಪ್ರಸವ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸ್ಕಾ್ಯನಿಂಗ್ ಮಾಡಿಸಿದಾಗ ಮಲಮತ್ತ (ಪ್ಪಸೆಂಟ್ ) ಪತ್ತೆಯಾಗಿದೆ. ರೋಗಿ ಸಂಬಂಧಕರು ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದರು.
ಪ್ರಸೂತಿ ತಜ್ಞೆ ಡಾ. ಶಮ್ಸನೂರ್ ನೇತೃತ್ವದ ತಂಡ 1 ಗಂಟೆಯ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಮಹಿಳೆಯ ಗರ್ಭಕೋಶ ಹೊರತೆಗೆದು ತಾಯಿ, ಮಗು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಮಗು 1.4 ಕೆಜಿ ತೂಕ ಹೊಂದಿದ್ದು, ಎನ್ಐಸಿಯು ನಿಗಾದಲ್ಲಿ ಇರಿಸಲಾಗಿದೆ ಎಂದು ಮಕ್ಕಳ ತಜ್ಞ ಡಾ. ಸುರಕ್ಷಿತ ಶೆಟ್ಟಿ ತಿಳಿಸಿದರು.
ಮಹಿಳೆಯ ಗರ್ಭಧಾರಣೆ ಸಂದರ್ಭದಲ್ಲಿ ಕಂಡುಬರುವ ಅಪರೂಪದ ಪ್ರಕರಣ ಇದಾಗಿದೆ. ಇಂತಹ ಸನ್ನಿವೇಶದಲ್ಲಿ ಮಹಿಳೆಯರು ತೀವ್ರ ರಕ್ತಸ್ರಾವವಾಗಿ ಮರಣ ಹೊಂದುವ ಸಂಭವವಿರುತ್ತದೆ. ತಾಲೂಕು ಆಸ್ಪತ್ರೆಯಲ್ಲಿ 25 ವರ್ಷಗಳ ನಂತರ ಇಂತಹ ಪ್ರಕರಣವನ್ನು ನಮ್ಮ ವೈದ್ಯರ ತಂಡ ಒಂದು ಗಂಟೆಯ ಯಶ್ವಸಿ ಶಸ್ತ್ರಚಿಕಿತ್ಸೆ ನಡೆಸಿ ಇಬ್ಬರನ್ನೂ ಬದುಕಿಸಿದ್ದಾರೆ ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ತಿಳಿಸಿದರು.