ದಾಖಲೆಗಳಿಲ್ಲದೆ ಶಾಲೆಗಳ ಅಭಿವೃದ್ಧಿಗೆ ತೊಂದರೆ, ಜಿಪಂ ಸಿಇಒ ಫೌಜಿಯಾ ತರನ್ನುಮ್ ಹೇಳಿಕೆ

Gangavati TP Meeting
ಗಂಗಾವತಿ ತಾಪಂ ಸಭಾಂಗಣದಲ್ಲಿ ಜಿಪಂ ಸಿಇಒ ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
Published on

ಗಂಗಾವತಿ: ಸರ್ಕಾರಿ ಶಾಲೆಗಳ ನಿವೇಶನ ದಾಖಲೆಗಳಿಗೆ ಸಂಬಂಧಿಸಿದಂತೆ ಶೀಘ್ರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಪಂ ಸಿಇಒ ಫೌಜಿಯಾ ತರನ್ನುಮ್ ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ದಾಖಲೆಗಳ ಸಮಸ್ಯೆಯಿಂದ ಬಹುತೇಕ ಶಾಲೆಗಳ ಅಭಿವೃದ್ಧಿಗೆ ತೊಂದರೆಯಾಗುತ್ತಿದ್ದು, ಅಂತಹ ಶಾಲೆಗಳ ಬಗ್ಗೆ ಡಿಡಿಪಿಐಯಿಂದ ಮಾಹಿತಿ ಪಡೆಯಲಾಗುವುದು. ನರೇಗಾದಡಿ ಎಲ್ಲ ಶಾಲೆಗಳಿಗೆ ಕಾಂಪೌಂಡ್, ಶೌಚಗೃಹ ಮತ್ತು ಕುಡಿವ ನೀರಿನ ವ್ಯವಸ್ಥೆ ಮಾಡಲಾಗುವುದು. ಮಳೆ ನೀರು ಕೊಯ್ಲು ಹಾಗೂ ಪೌಷ್ಟಿಕ ಕೈ ತೋಟ ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದೆ. ಗ್ರಾಪಂಗೊಂದರಂತೆ ಎಲ್ಲ ಸೌಲಭ್ಯಗಳಿರುವ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net