ಸಾಕ್ಷ್ಯಚಿತ್ರ ಬಿಡುಗಡೆ ನಾಳೆ

drama 2
Published on

ಕದಂಬ ರಂಗವೇದಿಕೆಯ ಆರು ದಶಕಗಳ ಸಾರ್ಥಕ ರಂಗಯಾತ್ರೆ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭ ಆ.24 ರಂದು ಸಂಜೆ 5.30ಕ್ಕೆ ರಂಗಾಯಣದ ಶ್ರೀರಂಗದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.

ಹಿರಿಯ ರಂಗಕರ್ಮಿ ಮೈಮ್ ರಮೇಶ್ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಲಿದ್ದಾರೆ. ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ಅಧ್ಯಕ್ಷ ಎಚ್.ಎಸ್.ಸುರೇಶ್‌ಬಾಬು, ರಂಗವಲ್ಲಿ ತಂಡದ ಎಚ್.ಆರ್.ರವಿಪ್ರಸಾದ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭ ರಂಗಕರ್ಮಿಗಳಾದ ಧನಂಜಯ ಮತ್ತು ಡಿ.ಮಧು ಅವರನ್ನು ಸನ್ಮಾನಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕದಂಬ ರಂಗವೇದಿಕೆ ಕಳೆದ ಆರು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆ ಮಾಡಿದೆ ಎಂದು ಅವರು ವಿವರಿಸಿದರು. ಗೋಷ್ಠಿಯಲ್ಲಿ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net