ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ ಕರವೇ ಮನವಿ

pg complent
Published on

ದೊಡ್ಡಬಳ್ಳಾಪುರ: ತಾಲೂಕಿನ ಬಾ ಶೆಟ್ಟಿಹಳ್ಳಿ ಪಪಂ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪೇಯಿಂಗ್ ಗೆಸ್ಟ್ (ಪಿಜಿ)ಗಳನ್ನು ನಡೆಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮಂಗಳವಾರ ಪಪಂ ಮುಖ್ಯಾಧಿಕಾರಿ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕರವೇ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಹೊರ ರಾಜ್ಯದಿಂದ ಸಾವಿರಾರು ಮಂದಿ ಉದ್ಯೋಗ ಅರಸಿ ಬಂದಿದ್ದಾರೆ. ಇವರನ್ನೇ ಗುರಿಯಾಗಿಸಿಕೊಂಡು ನಿಯಮ ಗಾಳಿಗೆ ತೂರಿ ಅನಧಿಕೃತವಾಗಿ ಪಿಜಿ ನಡೆಸಲಾಗುತ್ತಿದೆ. ಮಹಿಳಾ ಉದ್ಯೋಗಿಗಳಿಗೂ ಅಭದ್ರತೆ ಕಾಡುತ್ತಿದೆ. ಹೀಗಾಗಿ ಬಾಶೆಟ್ಟಿಹಳ್ಳಿ ಪಪಂ ವ್ಯಾಪ್ತಿಯಲ್ಲಿರುವ ಅನಧಿಕೃತ ಪಿಜಿಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಪರವಾನಗಿ ಇಲ್ಲದ ಪಿಜಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಪರಿಶೀಲನೆ ನಡೆಸಿ, ನೋಟಿಸ್ ನೀಡಲಾಗುತ್ತದೆ. ಯಾವುದೇ ಪರವಾನಗಿ ಇಲ್ಲದ ಪಿಜಿಗಳಿಗೆ ಬೀಗ ಜಡಿಯಲಾಗುವುದು ಎಂದು ನರಸಿಂಹಮೂರ್ತಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net