ಲಕ್ಷ್ಮೀ ಬರಮಾಡಿಕೊಂಡ ಸಂಭ್ರಮ

dbp program
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಗೃಹಲಕ್ಷ್ಮೀ ಯೋಜನೆಯ ಮೂಲಕ ಬಡ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಮರೇಶ್ ತಿಳಿಸಿದರು.
ತಾಲೂಕಿನ ಕಸಬಾ ಹೊಬಳಿಯ ಕಂಟನಕುಂಟೆ ಗ್ರಾಮದ ಮಾನಸಾ ಕನ್ವೆನ್ಷನ್ ಹಾಲ್‌ನಲ್ಲಿ ಕಂಟನಕುಂಟೆ ಗ್ರಾಪಂ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಯೋಜನೆಯ ಮೂಲಕ ಮನೆ ಯಜಮಾನಿ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ರೂ. ನೇರ ಪಾವತಿ ಯಾಗುತ್ತಿದ್ದು, ಮುಖ್ಯವಾಗಿ ಮಹಿಳೆಯರಿಗೆ ನೆರವಾಗಿ, ಮಹಿಳೆಯ ಸಶಕ್ತೀಕರಣ ಮಾಡುವ ಗುರಿ ಹೊಂದಲಾಗಿದೆ. ಪ್ರತಿ ಮನೆಯ ಯಜಮಾನಿ ಫಲಾನುಭವಿಗಳು ಇದರ ಪ್ರಯೋಜನವನ್ನು ಸರಿಯಾದ ಮಾರ್ಗದಲ್ಲಿ ಉಪಯೋಗಿಸಕೊಳ್ಳಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಹಿಳೆ ಎಲ್ಲ ರಂಗದಲ್ಲೂ ಛಾಪು ಮೂಡಿಸುತ್ತಿದ್ದಾಳೆ. ಗ್ರಾಮಾಂತರ ಭಾಗಗಳಲ್ಲಿ ಗಾಮೆರ್ಂಟ್ಸ್ ಸೇರಿ ಸಣ್ಣಪುಟ್ಟ ಕೆಲಸಗಳನ್ನು ನೆಚ್ಚಿಕೊಂಡು ಜೀವನ ನಡೆಸುತ್ತಿದ್ದ ಮನೆ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆ ಸಾಕಷ್ಟು ಸಹಾಯಕ್ಕೆ ಬರಲಿದೆ ಎಂದರು.

ಫೋಟೋ ಕ್ಲಿಕಿಸಿ ಸಂಭ್ರಮ
ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕ ಹಿನ್ನೆಲೆಯಲ್ಲಿ ಮಹಿಳೆಯರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮಹಿಳಾ ಸೀ ಶಕ್ತಿ ಸಂಘಗಳು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿ, ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net