ಒತ್ತುವರಿ ತೆರವುಗೊಳಿಸಲು ಮನವಿ

karave request
Published on

ದೊಡ್ಡಬಳ್ಳಾಪುರ: ಪಾದಚಾರಿ ಮಾರ್ಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ಅವರಿಗೆ ಮನವಿ ಸಲ್ಲಿಸಲಾಯಿತು.
ದೊಡ್ಡಬಳ್ಳಾಪುರ ನಗರ ಅತಿ ವೇಗವಾಗಿ ಬೆಳೆಯುತ್ತಿದ್ದು, ವಾಹನ ಸಂಚಾರ ಹಾಗೂ ಜನದಟ್ಟಣೆ ಹೆಚ್ಚಿದೆ. ರಸ್ತೆ ಬದಿಯ ಪಾದಚಾರಿ ಮಾರ್ಗಗಳಲ್ಲಿ ಸಣ್ಣಪುಟ್ಟ ವ್ಯಾಪಾರ, ವಹಿವಾಟು ನಡೆಸುತ್ತಿದ್ದಾರೆ. ಇದರಿಂದ ವಾಹನಗಳು ಹಾಗೂ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ವಾಹನ ಸವಾರರು, ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು, ಅಮಾಯಕರ ಜೀವಗಳು ಬಲಿಯಾಗುತ್ತಿವೆ. ಈ ಕಾರಣದಿಂದ ಜನರು ಪರದಾಡುವಂತಾಗಿದೆ. ಕೂಡಲೇ ರಸ್ತೆ ನಿಯಮ ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net