ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

police meeting
doddaballapura police meeting
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ನಗರ ಸೇರಿ ತಾಲೂಕಿನಾದ್ಯಂತ ಇತ್ತೀಚೆಗೆ ಪದೇಪದೆ ಸಂಭವಿಸುತ್ತಿರುವ ಅಪಘಾತಗಳ ತಡೆಗೆ ಎಚ್ಚೆತ್ತ ಪೊಲೀಸ್ ಇಲಾಖೆ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳ ಮಾಲೀಕರು ಹಾಗೂ ಚಾಲಕ, ಕ್ಲೀನರ್‌ಗಳ ಸಭೆಯನ್ನು ಗ್ರಾಮಾಂತರ ಠಾಣಾ ಆವರಣದಲ್ಲಿ ನಡೆಸಲಾಯಿತು.
ಠಾಣೆ ಇನ್‌ಸ್ಪೆಕ್ಟರ್ ಮುನಿಕೃಷ್ಣ ಮಾತನಾಡಿ, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಬೇಕು. ನಗರದಲ್ಲಿ ಇತ್ತೀಚೆಗೆ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಮಾಲೀಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನರು ಕೂಡ ರಸ್ತೆ ಮೇಲೆ ಓಡಾಡುವಾಗ ಎಚ್ಚರಿಕೆ ವಹಿಸಬೇಕು. ಸಧ್ಯ ಅಪಘಾತಗಳ ನಿಯಂತ್ರಣಕ್ಕೆ ಸಂಚಾರಿ ನಿಯಮ ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದರು.
ಕಳ್ಳತನದ ಬಗ್ಗೆಯೂ ಜಾಗ್ರತೆ ವಹಿಸಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಅನಾಹುತ ನಡೆಯುತ್ತವೆ. ಜನರಲ್ಲಿ ತಿಳಿವಳಿಕೆ ಬಂದಾಗ ಮಾತ್ರ ಅಪಘಾತ ಹಾಗೂ ಇತರೆ ಅಪರಾಧ ಚಟುವಟಿಕೆಗಳನ್ನು ತಡೆಯಬಹುದು. ಇನ್ನು ಪ್ರತಿಭಟನೆ ವಿಚಾರದಲ್ಲಿ ಕಾನೂನು ತುಂಬಾ ಬದಲಾವಣೆಯಾಗಿದೆ. ಸುಪ್ರೀಂಕೋರ್ಟ್, ಹೈಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿವೆ ಎಂದು ಮಾಹಿತಿ ನೀಡಿದರು.

ಅನುಮಾನಸ್ಪದ ವ್ಯಕ್ತಿಗಳ ಮಾಹಿತಿ ನೀಡಿ
ಆಟೋ ಚಾಲಕರಿಗೆ ನಗರದ ಎಲ್ಲ ಭಾಗದ ಚಿತ್ರಣ ಗೊತ್ತಿರುತ್ತದೆ. ನಗರಕ್ಕೆ ಬರುವ ಅಪರಿಚಿತರ ಬಗ್ಗೆ ಅನುಮಾನ ಇದ್ದರೆ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇತ್ತೀಚೆಗೆ ಗಾಂಜಾ ಪ್ರಕರಣಗಳು ಹೆಚ್ಚಿವೆ. ಅವುಗಳ ಪತ್ತೆಗೆ ನಿಮ್ಮ ಸಹಕಾರ ಬೇಕು. ವಿದ್ಯಾರ್ಥಿಗಳೇ ಹೆಚ್ಚು ಗಾಂಜಾ ಪ್ರಕರಣಗಳಲ್ಲಿ ಸಿಲುಕುತ್ತಿದ್ದಾರೆ. ಪಾಲಕರು ಮಕ್ಕಳ ಮೇಲೆ ನಿಗಾ ವಹಿಸಬೇಕು. ಇಲ್ಲದಿದ್ದರೆ ಮಕ್ಕಳ ಭವಿಷ್ಯ ಹಾಳಾಗಲಿದೆ ಎಂದು ಇನ್‌ಸ್ಪೆಕ್ಟರ್ ಮುನಿಕೃಷ್ಣ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net