ಮಹನೀಯರ ಜಯಂತಿಯಲ್ಲಿ ಲೋಪವಾಗದಿರಲಿ

mla meeting
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಪ್ರತಿವರ್ಷದಂತೆ ಈ ವರ್ಷವೂ ಮಹನೀಯರ ಜಯಂತಿಗಳನ್ನು ಯಾವುದೇ ಲೋಪ ಆಗದಂತೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸೆಪ್ಟೆಂಬರ್ 6ರಂದು ಶ್ರೀ ಕೃಷ್ಣ ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ವಿಭಾ ವಿದ್ಯಾ ರಾಠೋಡ್ ತಿಳಿಸಿದರು.
ತಾಲೂಕು ಆಡಳಿತದಿಂದ ಸೆ.6ರಂದು ಶ್ರೀ ಕೃಷ್ಣ ಜಯಂತಿ ಆಚರಿಸಲಾಗುತ್ತಿದ್ದು, ಸಮಾಜದ ಮುಖಂಡರು ಸಹಕಾರ ನೀಡಬೇಕು ಎಂದರು.
ಸೆ.6ರಂದು ಬೆಳಗ್ಗೆ 10 ತಾಲೂಕು ಕಚೇರಿ ಸಭಾಂಗಣದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕೆರೆ ಬಾಗಿಲು ಬಳಿಯ ವೇಣುಗೋಪಾಲ ಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಈ ವೇಳೆ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಕಲಾ ತಂಡಗಳು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಸೆ.17 ರಂದು ವಿಶ್ವಕರ್ಮ ಜಯಂತಿಯಂದು ನಗರದ ತಾಲೂಕು ಕಚೇರಿಯಿಂದ ಕಾಳಿಕಾಂಬ ದೇಗುಲದ ವರೆಗೆ ಮೆರವಣಿಗೆ ತೆರಳಲಾಗುವುದು. ಎರಡು ಕಾರ್ಯಕ್ರಮಗಳಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net