ಸಮರ್ಪಕವಾಗಿ ಬಸ್ ಸೌಕರ್ಯ ಕಲ್ಪಿಸಲು ಪಟ್ಟು

stuents protest
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬೆಳವಂಗಲ
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಹುಲಿಕುಂಟೆ ಬಳಿಯ ರಾಷ್ಟ್ರೀೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಒಂದೇ ಬಸ್ಸಿನಲ್ಲಿ 130ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಹೆಚ್ಚುವರಿ ಬಸ್ ಬಿಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಒಂದೇ ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರು ಸಂಚರಿಸಬೇಕಾದ್ದರಿಂದ ಬಸ್‌ಬ ಬಾಗಿಲಿನಲ್ಲೇ ನೇತಾಡಿಕೊಂಡು ಹೋಗುವ ಸ್ಥಿತಿ ಇದೆ. ಒಂದು ವೇಳೆ ಯಾರಾದರು ಬಿದ್ದು ಸತ್ತರೆ ಅಥವಾ ಗಾಯಗೊಂಡರೆ ಹೊಣೆ ಯಾರು ವಿದ್ಯಾರ್ಥಿಗಳು ಪ್ರಶ್ನಿಸಿದರು.
ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸಮರ್ಪಕ ಬಸ್‌ವ್ಯವಸ್ಥೆ ಕಲ್ಪಿಸದ ಹೊರತು ಬಸ್ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಪಟ್ಟುಹಿಡಿದಿದರು. ಗ್ರಾಮಸ್ಥರು ಸಹ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದರು.
ದಿನನಿತ್ಯವೂ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ನಿಲ್ದಾಣದಲ್ಲಿ ವಿದ್ಯಾರ್ಥಿಗಳು ನಿಂತಿದ್ದರು ಬಸ್ ನಿಲ್ಲಿಸದೆ ಹೋಗುತ್ತಾರೆ. ದಿನಂಪ್ರತಿ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲಾರದ ಸನ್ನಿವೇಶ ಎದುರಾಗಿದೆ ಎಂದು
ವಿದ್ಯಾರ್ಥಿನಿ ಸಿಂಚನಾ ಅಲವತ್ತುಕೊಂಡರು.
ಪ್ರತಿಭಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರದ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಸಂತೋಷ್ ಭೇಟಿ ನೀಡಿ ಸಮಸ್ಯೆ ಆಲಿಸಿದರು. ವಾರದೊಳಗಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಯಿತು. ದೊಡ್ಡಬೆಳವಂಗಲ ಠಾಣೆ ಪೇದೆ ತೀರ್ಥೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net