

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಗರ್ಭಿಣಿಯರು ಪೋಷಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದರಿಂದ ಮಗುವಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ರವಿಕುಮಾರ್ ತಿಳಿಸಿದರು.
ತಾಲೂಕಿನ ಕಂಟನಕುಂಟೆ ಗ್ರಾಪಂ ವ್ಯಾಪ್ತಿಯ ವಡ್ಡರಪಾಳ್ಯ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೌಷ್ಟಿಕ ಸಪ್ತಾಹದಲ್ಲಿ ಮಾತನಾಡಿ, ಜಂಕ್‌ುಡ್ ಸೇವನೆಯಿಂದ ಆರೋಗ್ಯಕ್ಕೆ ಹದಗೆಡಲಿದೆ. ಆದರೆ ತರಕಾರಿ, ಹಣ್ಣುಗಳಲ್ಲಿ ಹೆಚ್ಚಿನ ಪೋಷಕಾಂಶಗಳಿರುತ್ತವೆ. ಈ ಆಹಾರ ಸೇವನೆ ಗರ್ಭಿಣಿಯರಿಗೆ ಅಗತ್ಯ ಪೋಷಕಾಂಶ ನೀಡುತ್ತದೆ. ಹಾಗಾಗಿ ನಿತ್ಯದ ಆಹಾರದಲ್ಲಿ ವಿವಿಧ ಹಣ್ಣು, ತರಕಾರಿ ಸೇವಿಸಬೇಕು ಎಂದರು.
ಆಶಾ ಕಾರ್ಯಕರ್ತೆ ಗೀತಾ ಮಾತನಾಡಿ, ಪೌಷ್ಟಿಕ ಸಪ್ತಾಹದಡಿ ಗರ್ಭಿಣಿಯರ ಮನೆಗಳಿಗೆ ತೆರಳಿ ತರಕಾರಿ, ಹಣ್ಣುಗಳ ಸೇವನೆಯ ಮಹತ್ವವನ್ನು ತಿಳಿಸುವುದು ಹಾಗೂ ಸಮಸ್ಯೆಗಳಿದ್ದಲ್ಲಿ ಪ್ರತಿ ತಿಂಗಳು ಆಸ್ಪತ್ರೆಗಳಿಗೆ ತೆರಳಿ ವೈದ್ಯರ ಸಲಹೆ ಪಡೆದುಕೊಳ್ಳುವಂತೆಯೂ ಸಲಹೆ ನೀಡಲಾಗುತ್ತಿದ್ದು, ಗರ್ಭಿಣಿಯರು ಹಾಗೂ ಬಾಣಂತಿಯರು ಆರೋಗ್ಯದ ಜತೆಗೆ ಮಗುವಿನ ಬೆಳವಣಿಗೆಗೆ ಬಗ್ಗೆಯೂ ಜಾಗ್ರತೆವಹಿಸಬೇಕು ಎಂದರು.