

ಹಾವೇರಿ: ಮುಂದೆ ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎಂದಿನ ಕ್ಷೇತ್ರವನ್ನು ಬದಲಿಸಿ ಸ್ಪರ್ಧಿಸಲಿದ್ದಾರಾ?
- ಅವರು ತಮ್ಮ ತವರು ಕ್ಷೇತ್ರ ಶಿಗ್ಗಾಂವಿ ಬದಲಿಗೆ ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆಗೆ ಇಂದು ಖುದ್ದು ಅವರೇ ತಮ್ಮ ಸ್ಪಷ್ಟನೆಯನ್ನು ನೀಡಿದ್ದಾರೆ.
ಸವಣೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಕ್ಷೇತ್ರ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಅತಿ ಹೆಚ್ಚು ಪ್ರೀತಿ ತೋರಿಸಿದ್ದಾರೆ. ಹೀಗಾಗಿ ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ. ಶಿಗ್ಗಾಂವಿ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಎಲ್ಲ ಊಹಾಪೋಹಗಳನ್ನು ತಳ್ಳಹಾಕಿದ್ದಾರೆ.
ಇದನ್ನೂ ಓದಿ: ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮುಂದೆ ಬರಲಿರುವ ಚುನಾವಣೆಯು ದಿಕ್ಸೂಚಿ ಮತಸಮರ. ರಾಜ್ಯದಲ್ಲೂ ಜನತೆ ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಬೆಂಬಲ ನೀಡಲಿದೆ. 2023ರಲ್ಲಿ ಮತ್ತೆ ಸ್ವಂತ ಶಕ್ತಿಯ ಮೇಲೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಸಿಎಂ ಹೇಳಿದರು.