ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ ೬ ತಿಂಗಳು ಜೈಲು ವಾಸ

WhatsApp Image 2023-08-17 at 3.20.51 PM
Published on

ಮಡಿಕೇರಿ: ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ Section:- 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ೬ ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ ೧೧೨ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ದಾಖಲು :

ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಬಿ.ಮಾಚಯ್ಯ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net